ನವದೆಹಲಿ, ಜ.14 (Daijiworld News/PY): ಪ್ರತಿನಿತ್ಯ ಪಹರೆ ಕಾರ್ಯನಿರ್ವಹಿಸುತ್ತಿದ್ದ 11ನೇ ಗರ್ವಾಲ್ ರೈಫಲ್ಸ್ ರೆಜಿಮೆಂಟ್ಗೆ ಸೇರಿದ ಯೋಧನೊಬ್ಬ ಹಿಮದಲ್ಲಿ ಸಿಲುಕಿ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಾಪತ್ತೆಯಾದ ಯೋಧ ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ ಎಂದು ತಿಳಿದುಬಂದಿದೆ.
ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ನ ಗಡಿನಿಯಂತ್ರಣ ರೇಖೆಯ ಬಳಿ ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ ಎಂಬ ಯೋಧ ಹಿಮದಲ್ಲಿ ಸಿಲುಕಿದ್ದು, ಕಾಣೆಯಾದ ಯೋಧನನ್ನು ಪತ್ತೆಹಚ್ಚಲು ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.
ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ ಅವರು ಮೂಲತಃ ಉತ್ತರಕಾಂಡದ ಡೆಹ್ರಡೂನ್ನವರಾಗಿದ್ದು, 2002ರಿಂದ ಭಾರತೀಯ ಸೇನೆಯ 11ನೇ ಗರ್ವಾಲ್ ರೈಫಲ್ಸ್ ರೆಜಿಮೆಂಟ್ನಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದ್ದರು.
ಗುಲ್ ಮಾರ್ಗ್ ಸೆಕ್ಟರ್ನಲ್ಲಿ ಭಾರಿ ಹಿಮಪಾತವಾಗುತ್ತಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.