ನವದೆಹಲಿ, ಜ 16 (Daijiworld News/MB) : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದರಿಂದ ರಾಜ್ಯದ ಜನತೆಗೆ ಆಗುವ ಅನುಕೂಲವಾಗುತ್ತದೆ ಎಂಬುದರ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ 36 ಸಚಿವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.
ಜ.18 ರಿಂದ ಜ.24ರವರೆಗೂ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶದ ಸೂಕ್ಷ್ಮ ಸ್ಥಳಗಳಿಗೆ ಭೇಟಿ ಕೇಂದ್ರ ಸಚಿವರು ಭೇಟಿ ನೀಡಲಿದ್ದು ಈ ರದ್ದತಿಯ ಬಗ್ಗೆ ಅರಿವು ಮೂಡಿಸಲಿದ್ದಾರೆ.
ಹಾಗೆಯೇ ಈ ಭೇಟಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಹಾಗೂ ರದ್ದತಿಯಿಂದಾಗಿ ರಾಜ್ಯದಲ್ಲಿ ಆದ ಧನಾತ್ಮಕ ಅಂಶಗಳ ಬಗ್ಗೆ ತಿಳಿಸಲಿದ್ದಾರೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡಿ 6 ತಿಂಗಳುಗಳು ಆಗಿದ್ದು, ಈಗ ಭೇಟಿ ಮಾಡಲಿರುವ ಕೇಂದ್ರ ನಿಯೋಗದ ನೇತೃತ್ವವನ್ನು ಗೃಹ ಸಚಿವ ಅಮಿತ್ ಶಾ ವಹಿಸಿಕೊಳ್ಳಲಿದ್ದಾರೆ.