ನವದೆಹಲಿ, ಜ 16 (Daijiworld News/MB) : ನಿರ್ಭಯಾ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಲ್ಲಿಕೆ ಮಾಡಿರುವ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕಾರ ಮಾಡಿದೆ.
ಸರ್ಕಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಈ ತಿರಸ್ಕೃತ ಅರ್ಜಿಯನ್ನು ಕಳುಹಿಸಿಕೊಟ್ಟಿದ್ದು ಅಲ್ಲಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಬುಧವಾರ ದೆಹಲಿ ಸರ್ಕಾರ ಅಪರಾಧಿ ಮುಕೇಶ್ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ಅಪರಾಧಿಗಳನ್ನು ಜ.22ರಂದು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ಹೇಳಿತ್ತು.
2012 ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಮುಖೇಶ್ ಕ್ಯುರೇಟಿವ್ ಅರ್ಜಿ ವಜಾಗೊಂಡ ತಕ್ಷಣ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ.