ನವದೆಹಲಿ, ಜ 17 (Daijiworld News/MSP): ರಾಷ್ಟ್ರಪಿತ ಮಹಾತ್ಮ ಗಾಂಧಿಗೆ "ಭಾರತ ರತ್ನ " ಪ್ರಶಸ್ತಿ ನೀಡಬೇಕು ಎಂದು ಸುಪ್ರೀಂಗೆ ಸಲ್ಲಿಕೆಯಾಗಿದ್ದ ಪಿಐಎಲ್ ಗೆ ಸಂಬಂಧಿಸಿಂತೆ ವಿಚಾರಣೆ ನಡೆಸಿದ ಸುಪ್ರೀಂ ಯಾವುದೇ ಆದೇಶ ನೀಡಲು ನಿರಾಕರಿಸಿದೆ.
ಮಹಾತ್ಮ ಗಾಂಧಿಯವರಿಗೆ ರಾಷ್ಟ್ರಪಿತ ಎಂದು ಗೌರವಿಸಲಾಗಿದೆ. ಅಂತಹ ಮಹಾನ್ ವ್ಯಕ್ತಿಗೆ ಸಾಮಾನ್ಯ ಪ್ರಶಸ್ತಿಯಿಂದ ಬೆಲೆಕಟ್ಟಲು ಸಾಧ್ಯವೇ? ಎಂದು ಪ್ರಶ್ನಿಸಿದ ಸುಪ್ರೀಂ, ಗಾಂಧಿಜೀಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ವಜಾಗೊಳಿಸಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಯವರು "ಭಾರತ ರತ್ನ ಪ್ರಶಸ್ತಿ"ಗಿಂತಲೂ ಮೇರು ವ್ಯಕ್ತಿತ್ವ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ. ಗಾಂಧಿಜೀಗೆ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕೆಂದು ಕೋರಿ ಸುಪ್ರೀಂಗೆ ಈ ಹಿಂದೆ ಹಲವಾರು ಪಿಐಎಲ್ ಸಲ್ಲಿಕೆಯಾಗಿದ್ದು ಅವೆಲ್ಲವೂ ತಿರಸ್ಕೃತಗೊಂಡಿತ್ತು.