ನವದೆಹಲಿ, ಜ 17 (Daijiworld News/MSP): ರಾಷ್ಟ್ರ ರಾಜಧಾನಿಯಲ್ಲಿ ಫೆ.8ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಗರಿಕೆದರಿದ್ದು, ಬಿಜೆಪಿ ಪಕ್ಷವೂ 57 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ನವದೆಹಲಿಯಲ್ಲಿ ಬಿಜೆಪಿ ಮುಖಂಡ ಮನೋಜ್ ತಿವಾರಿ ಪತ್ರಿಕಾಗೋಷ್ಟಿ ನಡೆಸಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದು, 57 ಅಭ್ಯರ್ಥಿಗಳ ಪೈಕಿ 11 ಮಂದಿ ಪರಿಶಿಷ್ಟ ಜಾತಿ ಹಾಗೂ ನಾಲ್ವರು ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ಈಗಾಗಲೇ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಎಲ್ಲಾ 70 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದ್ದು ದೆಹಲಿಯಲ್ಲಿ ಮಾಡು ಇಲ್ಲವೇ ಮಡಿ ಎನ್ನುವ ಸವಾಲು ಆಮ್ ಆದ್ಮಿ ಪಕ್ಷ ಎದುರಿಸುತ್ತಿದೆ.
ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿ ಅವರ ವಿರುದ್ದ ಬಿಜೆಪಿಯಿಂದ ಪತ್ಪಾರ್ ಗಂಜ್ ಕ್ಷೇತ್ರದಲ್ಲಿ ರವಿ ನೇಗಿ ಸ್ಪರ್ಧಿಸಲಿದ್ದಾರೆ. ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ.