ಹುಬ್ಬಳ್ಳಿ, ಜ.18 (Daijiworld News/PY) : ಪೌರತ್ವ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಬಂದ ಅಮಿತ್ ಶಾ ಅವರ ವಿರುದ್ದ ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಲು ಮುಂದಾದ ಹಲವರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕೋರ್ಟ್ ಸರ್ಕಲ್ ಬಳಿ ನೆರೆದಿದ್ದ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಪ್ರತಿಭಟನೆ ಮಾಡದಂತೆ ತಿಳಿಸಿದ್ದರು. ಆದರೆ ಪೊಲೀಸರ ಮಾತನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಲು ಮುಂದಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ಸಿಎಎ ಹಾಗೂ ಎನ್ಆರ್ಸಿ ಪರ ಪ್ರಚಾರ ನಡೆಯುವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಬಂದಿದ್ದ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆ ಮಾಡಲು ಮುಂದಾದ ಎಸ್ಡಿಪಿಐಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕಸಬಾ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.