ಬೆಂಗಳೂರು, ಜ.18 (Daijiworld News/PY) : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೂತನ ಕಚೇರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದ ವೇಳೆ ಪಾಲ್ಗೊಂಡ ಆದಿ ಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಯ ವಿದ್ಯಾಪೀಠದಲ್ಲಿರುವ ಬೃಂದಾವನಕ್ಕೆ ಅಮಿತ್ ಶಾ ಭೇಟಿ ನೀಡಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಹೆಚ್ಎಎಲ್ಗೆ ತೆರಳಿದ ಅಮಿತ್ ಶಾ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಹುಬ್ಬಳಿಯಲ್ಲಿ ಆಯೋಜಿಸಲಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನಜಾಗೃತಿ ಕಾರ್ಯಕ್ರಮಕ್ಕೆ ಪ್ರಯಾಣಿಸಿದರು.