ತುಮಕೂರು, ಜ 19 (Daijiworld News/MB) : 'ನಡೆದಾಡುವ ದೇವರು' ಎಂದೇ ಭಕ್ತರಿಂದ ಆರಾಧನೆಗೆ ಒಳಗಾದವರಾದ ಸಿದ್ದಗಂಗಾಶ್ರೀ ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿ ಜನವರಿ 21 ರಂದು ಒಂದು ವರ್ಷ ಸಂದಿಸಲಿದ್ದು ಇಂದುತುಮಕೂರು ಸೇರಿದಂತೆ ನಾಡಿನ ಹಲವೆಡೆ ಪುಣ್ಯ ಸ್ಮರಣೆ ಕಾರ್ಯಕ್ರಮಗಳ್ನು ಹಮ್ಮಿಕೊಳ್ಳಲಾಗಿದೆ. ಶ್ರೀಗಳ ಪ್ರಥಮ ಪುಣ್ಯ ಸ್ಮರಣೆಯ ನಿಟ್ಟಿನಲ್ಲಿ ಸಿದ್ದಗಂಗಾ ಮಠದಲ್ಲಿ ವಿಶೇಷ ಪೂಜೆ, ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಶ್ರೀಗಳ ಒಂದು ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಸಕಲ ತಯಾರಿ ನಡೆದಿದ್ದು ಸುಮಾರು 1 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪುಣ್ಯಸ್ಮರಣೆ ನಡೆಯಲಿದ್ದು, ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮಿಜಿ ಅಧ್ಯಕ್ಷತೆ ವಹಿಸಲಿದ್ದು ಗಣ್ಯರು ಭಾಗವಹಿಸಲಿದ್ದಾರೆ.
ಪುಣ್ಯಾರಾಧನೆ ಕಾರ್ಯಕ್ರಮವು ಬೃಹತ್ ಪ್ರಮಾಣದಲ್ಲಿ ನಡೆಯಲಿದ್ದು ಅನ್ನ ದಾಸೋಹಕ್ಕೆ ಶ್ರೀಗಖೂ ನೀಡಿದ್ದ ಪಾಮುಖ್ಯತೆಯನ್ನು ನೆನೆದು ಇಂದು ಹಲವು ಕಡೆಗಳಲ್ಲಿ ಅನ್ನ ದಾಸೋಹ ಏರ್ಪಡಿಸಲಾಗಿದೆ. ಹಾಗೆಯೇ ಸ್ಮರಣೋತ್ಸವಕ್ಕೆ ಬರುವ ಭಕ್ತರಿಗಾಗಿ ಮಠದ ಆವರಣದಲ್ಲಿ ಏಳು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಊಟದ ವ್ಯವಸ್ಥೆಗೆ ಉಸ್ತುವಾರಿ ನೀಡಿ ಅಚ್ಚುಕಟ್ಟಾಗಿ ನಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.