ಹಾವೇರಿ, ಜ 20 (Daijiworld News/MB) : ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುಮಾರು 8:45ರಿಂದ 9 ಗಂಟೆಗೆ ಅನಾಮಧೇಯ ವ್ಯಕ್ತಿ ಬಂದು ಬ್ಯಾಗ್ ಇಟ್ಟಿರುವುದನ್ನು ಸಿಸಿ ಟಿವಿಯಲ್ಲಿ ಗುರುತಿಸಲಾಗಿದ್ದು ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂದು ಪತ್ತೆ ಹಚ್ಚುವಲ್ಲಿ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದಾರೆ. ಪ್ರಕರಣವನ್ನು ಶೀಘ್ರ ಬೇದಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಬಳಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಕುರಿತಂತೆ ಹೇಳಿಕೆ ನೀಡಿದ ಅವರು, ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಬಳಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಎಂದು ತಿಳಿಸಿದ್ದಾರೆ.
ದೇಶ ದ್ರೋಹ ಮಾಡುವ ಶಕ್ತಿಗಳು ಭಯೋತ್ಪಾದನೆ ಮಾಡಿ ಜನರಲ್ಲಿ ಭಯ ಸೃಷ್ಟಿ ಮಾಡುತ್ತಾರೆ. ಈ ಕೃತ್ಯ ನಮ್ಮ ದೇಶದ ಆರ್ಥಿಕ ಚಟುವಟಿಕೆಗಳಿಗೆ ಧಕ್ಕೆ ತರುವಂತದ್ದು. ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಏಳೆಂಟು ವರ್ಷಗಳಿಂದ ಇಂತಹ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯ ಬರುವ ಸಂದರ್ಬದಲ್ಲಿ ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದ್ದು ನಾವು ಅವರ ಈ ಪ್ರಯತ್ನಕ್ಕೆ ಭಂಗ ಮಾಡುತ್ತಲ್ಲೇ ಬಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ.