ಲಖನೌ, ಜ 21 (Daijiworld News/MB) : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧ ಮಾಡುವವರು ಆಧಾರವಿಲ್ಲದೆ ವದಂತಿಯನ್ನು ಹರಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಸಿಎಎ ಜಾಗೃತಿ ಅಭಿಯಾನದಲ್ಲಿ ಉತ್ತರ ಪ್ರದೇಶದ ರಾಜಧಾನಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, "ಸಿಎಎಯಿಂದ ಹೇಗೆ ಯಾವುದೇ ವ್ಯಕ್ತಿಯ ಪೌರತ್ವವನ್ನು ಹೇಗೆ ಕಸಿದುಕೊಳ್ಳುತ್ತದೆ ಎಂಬುದನ್ನು ಅವರು ಸಾಬೀತು ಮಾಡಿ ತೋರಿಸಲಿ" ಎಂದು ವಿರೋಧ ಪಕ್ಷಗಳಿಗೆ ಸವಾಲು ಹಾಕಿದ್ದಾರೆ.
"ನೀವು ಎಷ್ಟು ಬೇಕಾದರೂ ಪ್ರತಿಭಟನೆ ನಡೆಸಿ ನಾವು ಕಾಯ್ದೆಯನ್ನು ಹಿಂದಕ್ಕೆ ಪಡೆಯುವ ಮಾತೇ ಇಲ್ಲ ಎಂದು ಹೇಳಿ 1947ರಲ್ಲಿ ಸ್ವಾತಂತ್ರ್ಯ ದೊರೆಯುವ ಸಂದರ್ಭದಲ್ಲಿ ದೇಶ ವಿಭಜನೆಯಾದದ್ದು ಕಾಂಗ್ರೆಸ್ ಮಾಡಿದ ಪಾಪದಿಂದಾಗಿ" ಎಂದು ದೂರಿದರು.
ಹಾಗೆಯೇ ಈ ಕಾಯ್ದೆಗೆ ಸಂಬಂಧಿಸಿ ಚರ್ಚೆಗೆ ಬರುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ಗೆ ಹೇಳಿದರು.