ದಾವಣಗೆರೆ, ಜ.23 (Daijiworld News/PY) : "ರಾಜ್ಯದಲ್ಲಿ ಆರ್ಎಸ್ಎಸ್ ಹಾಗೂ ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡುವುದಿಲ್ಲ" ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರ, "ಆರ್ಎಸ್ಎಸ್ ಹಾಗೂ ಬಜರಂಗದಳ ಸಂಘಗಳು ದೇಶಭಕ್ತ ಸಂಘಟನೆಗಳು. ಈ ಸಂಘಟನಕೆಗಳು ನೆರೆಪರಿಹಾರ ಸೇರಿದಂತೆ ಹಲವಾರು ಉತ್ತಮ ಕಾರ್ಯಗಳನ್ನು ಮಾಡಿವೆ" ಎಂದರು.
ಹೆಚ್ಡಿಕೆ ಅವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು, "ಹೆಚ್ಡಿಕೆ ಅವರು ಏನು ಹೇಳುತ್ತಾರೋ ಅವರಿಗೆ ತಿಳಿದಿರುವುದಿಲ್ಲ" ಎಂದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ವಿಚಾರಣೆ ಬಗ್ಗೆ ಮಾತನಾಡಿದ ಅವರು, "ನಾನು ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದಿಲ್ಲ. ಈಗಾಗಲೇ ಈ ವಿಚಾರವಾಗಿ ಮಂಗಳೂರು ಕಮಿಷನರ್ ಡಾ. ಹರ್ಷ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ಎಲ್ಲಾ ವಿಷಯಗಳನ್ನು ಹೇಳಿದ್ದಾರೆ. ಪೊಲೀಸರು ಈ ವಿಚಾರವಾಗಿ ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ತಿಳಿಯಲಿದೆ" ಎಂದು ಹೇಳಿದರು.
ಮೌಢ್ಯ ನಿಷೇಧ ಕಾಯ್ದೆ ಜಾರಿ ಬಗ್ಗೆ ಮಾತನಾಡಿದ ಅವರು, "ಈ ವಿಷಯದ ಬಗ್ಗೆ ಗೊಂದಲ ಇತ್ತು. ಆದರೆ ಈಗ ಸರಿಯಾಯಿತು" ಎಂದು ಹೇಳಿದರು.