ಬೆಂಗಳೂರು, ಜ 23 (DaijiworldNews/SM): ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾನ್ನುಡಿಯಂತೆ, ಒಂಭತ್ತನೇ ವಯಸ್ಸಿಗೇ ಪುಸ್ತಕ ಬರೆದು, ಭಾರತದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದಿಗೆ ಪಾತ್ರರಾದ ಬಾಲಕಿ, ಕವನಗಾರ್ತಿ ಮಾನ್ಯ ಹರ್ಷ. ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮುದ್ದಿನ ಮಗಳು ಮಾನ್ಯ ಹರ್ಷ.
ಬೆಂಗಳೂರಿನ ವಿಬ್ಗಯಾರ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಈಕೆ, ಐದು ದಾಖಲೆಗಳ ಒಡತಿಯಾಗಿದ್ದಾಳೆ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವಜ್ರ ವರ್ಲ್ಡ್ ರೆಕಾರ್ಡ್, ಗೋಲ್ಡನ್ ಬುಕ್ ಆಫ್ ರೆಕಾರ್ಡ್, ವರ್ಲ್ಡ್ ರೆಕಾರ್ಡ್ಸ್ ಇಂಡಿಯಾ ಹೀಗೆ ಐದು ಬಿರುದುಗಳು ಈ ಪುಟ್ಟ ಪೋರಿಗೆ ಪ್ರಾಪ್ತವಾಗಿದೆ. ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ಹರೆಯದ ಮಾನ್ಯ ಹರ್ಷ,ಈ ಸಣ್ಣ ವಯಸ್ಸಿನಲ್ಲೇ " ನೇಚರ್ ಅವರ್ ಫ್ಯೂಚರ್" ಪುಸ್ತಕ ಬರೆದು "ಭಾರತದ ಕಿರಿಯ ಕವನಗಾರ್ತಿ" ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.
2019 ಜುಲೈ 5ರಂದು ಮುದ್ರಣಗೊಂಡ "ನೇಚರ್ ಅವರ್ ಫ್ಯೂಚರ್" ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿನ್ನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶಪ್ರೇಮ, ಸೈನಿಕರ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.
ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವನಗಾರ್ತೀಯ ಬರೆಯುವ ಹವ್ಯಾಸವನ್ನು ಮತ್ತಷ್ಪು ಪ್ರೋತ್ಸಾಹಿಸಿದರು. 2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ, "ಥಾಂಕ್ಸ್ ಗಿವಿಂಗ್" ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ. ಮೂರು ವರ್ಷಗಳ, ಪುಸ್ತಕ ಮುದ್ರಿಸುವ, ಈಕೆಯ ಕನಸು ಈಗ ನನಸಾಗಿದೆ.
"ನೇಚರ್ ಅವರ್ ಫ್ಯೂಚರ್" ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿಗೆ ಕನ್ನಡಿ ಹಿಡಿದಂತಿದೆ. 2018ರ ಮಾರ್ಚ್ 22ರಂದು ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ, ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ "ನೀರು ಉಳಿಸಿ" ಆಂದೋಲನ ನಡೆಸಿದ್ದಳು.
ಕಿರಿಯ ಕವಯತ್ರಿ ಹರ್ಷ ಪಡೆದ ಪ್ರಶಸ್ತಿಗಳು:
1. ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ "ಭಾರತದ ಅತ್ಯಂತ ಕಿರಿಯ ಕವನಗಾರ್ತಿ" ಎಂಬ ಬಿರುದು
2. ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ, "ಗ್ರಾಂಡ್ ಮಾಸ್ಟರ್" ಬಿರುದು , ಪಾರಿತೋಷಕ
3. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ" ಪರಿಸರ ಕುರಿತ ಕವನಗಳು ರಚಿಸಿದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದು, ಪಾರಿತೋಷಕ, ಮೆಡಲ್
4. ಕಿರಿಯ ವಯಸ್ಸಿನಲ್ಲಿ ನೇಚರ್ ವಿಚಾರವಾಗಿ ಪುಸ್ತಕ ಬರೆದಿರುವ ಕಿರಿಯ ಬರಹಗಾರ್ತಿ ವಲ್ಡ್ ರೆಕಾರ್ಡ್ಸ್ ಇಂಡಿಯಾ ಬಿರುದು
5. ವಜ್ರ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ