ಬೆಂಗಳೂರು, ಜ 24 (Daijiworld News/MB) : ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ವರದಿ ಸಲ್ಲಿಕೆ ಮಾಡುವಂತೆ ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ.
ಶುಕ್ರವಾರ ಮಧ್ಯಾಹ್ನದ ಒಳಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿ ವರದಿ ಕೇಳಿದ್ದು ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ ಎಂದು ತಿಳಿದು ಬಂದಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾದ ಹಿನ್ನಲೆಯಲ್ಲಿ ಹಲವು ವದಂತಿಗಳು ಹಬ್ಬಿದ್ದವು ಈಗ ಪ್ರಕರಣದಲ್ಲಿ ತಿರುವು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಂತರ ವರದಿ ಕೇಳಿದೆ ಎಂದು ವರದಿ ತಿಳಿಸಿದೆ.