ನವದೆಹಲಿ, ಜ.25 (Daijiworld News/PY): ಭಾರತದ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲು ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೊ ಅವರು ನವದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜೈರ್ ಬೋಲ್ಸೋನಾರೊ ಅವರನ್ನು ಬರಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಬೋಲ್ಸೊನಾರೊ ಅವರು ದೆಹಲಿಗೆ ಆಗಮಿಸಿದ್ದು, ಕೇಂದ್ರ ಸಚಿವ ವಿ ಮುರಳೀಧರನ್ ಅವರೊಂದಿಗೆ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ.
ಜ.24 ಶುಕ್ರವಾರದಂದು ಬ್ರೆಜಿಲ್ ಅಧ್ಯಕ್ಷ ಬೋಲ್ಸೋನಾರೊ ಅವರು ಭಾರತಕ್ಕೆ ಆಗಮಿಸಿದ್ದು, ಈ ಸಂದರ್ಭ ಪ್ರಧಾನಿ ಮೋದಿ ಅವರು ಸ್ವಾಗತಿಸಿ ಜೈರ್ ಬೋಲ್ಸೋನಾರೊ ಅವರನ್ನು ಬರಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಜೈರ್ ಅವರು 4 ದಿನಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಕೃಷಿ, ಇಂಧನ ಹಾಗೂ ರಕ್ಷಣಾ ಕ್ಷೇತ್ರದ ವಿಚಾರವಾಗಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.