ಬೆಂಗಳೂರು, ಜ 26 (Dajiworld News/MB) : ಹಲವಾರು ಜನರು ಪ್ರಾಣ ತ್ಯಾಗ ಮಾಡಿದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ನಮ್ಮ ಸಂವಿಧಾನ ಶ್ರೇಷ್ಠ ಸಂವಿಧಾನ. ಆದರೆ ಬಿಜೆಪಿಯವರಿಗೆ ಸಂವಿಧಾನದ ಮೇಲೆ ಯಾವುದೇ ನಂಬಿಕೆ ಇಲ್ಲ. ಕೇಂದ್ರ ಸರ್ಕಾರ ಒಂದು ಸಮುದಾಯ ಟಾರ್ಗೆಟ್ ಮಾಡಿ ಕಾನೂನು ರೂಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಮ್ಮ ದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ದೇಶ ಅಪಾಯದಲ್ಲಿದೆ. ಆ ಹಿನ್ನಲೆಯಲ್ಲಿ ನಾವು ಸಂವಿಧಾನ ರಕ್ಷಣೆ ಮಾಡುವ ಕಾರ್ಯ ಮಾಡಬೇಕು. ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿ ಕಾನೂನು ರೂಪಿಸುತ್ತಿದೆ. ನಮ್ಮ ಸಂವಿಧಾನದ ಪ್ರಕಾರ ಎಲ್ಲರೂ ಸಮಾನರು. ನಾವೆಲ್ಲರೂ ಸಂವಿಧಾನವನ್ನು ಉಳಿಸುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದರು.
ಸೋತವರಿಗೆ ಸಚಿವ ಸ್ಥಾನ ಇಲ್ಲ ಅಂದ ಬಿ ಎಸ್ ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ದ್ರೋಹಿಗಳಿಗೆ ಸರಿಯಾದ ಪಾಠ ಆಗಿದೆ. ನಂಬಿದವರಿಗೆ ದ್ರೋಹ ಬಗೆದವರಿಗೆ ಇದೇ ಶಿಕ್ಷೆ ಆಗಬೇಕು ಎಂದು ವ್ಯಂಗ್ಯವಾಡಿದರು.