ಬೆಂಗಳೂರು, ಜ 26 (Dajiworld News/MB) : ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಗಣರಾಜ್ಯೋತ್ಸವಕ್ಕೆ ಶುಭಕೋರಿ ಟ್ವೀಟ್ ಮಾಡಿರುವ ಅವರು,"ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ. ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ ಎಂದು ಆರೋಪ ಮಾಡಿದ್ದಾರೆ.