ಬೆಂಗಳೂರು, ಜ 27 (DaijiworldNews/SM): ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು ಎಂಬ ಉಪಮುಖ್ಯಮಂತ್ರಿಗಳ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಸಮಾಜವನ್ನು ಒಡೆಯುವ ಕೆಲಸವನ್ನು ಎಚ್ಡಿಕೆ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಆರೋಪಿಸಿದ್ದು, ಇದಕ್ಕೆ ಮಾಜಿ ಮುಖ್ಯಮಂತ್ರಿ ಆಕ್ರೋಶ ಹೊರಹಾಕಿದ್ದಾರೆ. ಒಂದು ಸಮುದಾಯದ ನಾಯಕನನ್ನು ಟೀಕಿಸಲು ಅದೇ ಸಮುದಾಯದ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿಯ ಸೋಂಕು ಎಂದು ಹರಿಹಾಯ್ದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತನ್ನ ಧರ್ಮ, ಸಮಾಜದ ಬಗ್ಗೆ ಅಪಾರ ಗೌರವ ಇಟ್ಟುಕೊಂಡು ಇತರ ಧರ್ಮ, ಸಮಾಜಗಳ ಮೇಲೆ ಅಷ್ಟೇ ಗೌರವ ಹೊಂದುವುದು ನಾನು ನಂಬಿದ ಜಾತ್ಯತೀತತೆ. ಇದರಲ್ಲಿ ಒಕ್ಕಲಿಗ ಅಸ್ಮಿತೆಯೂ ಇದೆ, ಇತರ ಸಮಾಜದ ಮೇಲಿನ ಗೌರವವೂ ಇದೆ. ನಿತ್ಯ ಅನ್ಯಧರ್ಮಗಳ ಮೇಲೆ ದಾಳಿ ಮಾಡುವ, ಜಾತಿಗಳನ್ನು ಮತಕ್ಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.