ಪಶ್ಚಿಮ ಬಂಗಾಳ, ಜ 27 (Daijiworld News/MSP): ಸೆಲ್ಫಿ ಹುಚ್ಚು ಯುವತಿಯ ಪ್ರಾಣಕ್ಕೆ ಎರವಾದ ಘಟನೆ ಜಲ್ ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ಸೆಲ್ಫಿ ಕ್ಲಿಕ್ ಮಾಡುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ 21 ವರ್ಷದ ವಿದ್ಯಾರ್ಥಿನಿ ಮೃತಪಟ್ಟರೆ ವಿದ್ಯಾರ್ಥಿನಿ ಸ್ನೇಹಿತೆ ರೈಲು ಗುದ್ದುವುದನ್ನು ತಪ್ಪಿಸಿಕೊಳ್ಳಲು ನದಿಗೆ ಹಾರಿ ಗಂಭೀರ ಗಾಯಗೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಭಾನುವಾರ ಈ ಘಟನೆ ನಡೆದಿದ್ದು, ಓಡ್ಲಾಬರಿ ಪ್ರದೇಶದ ಗೀಸ್ ನದಿಯ ರೈಲ್ವೇ ಬ್ರಿಡ್ಜ್ ನಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ರೈಲ್ವೇ ಬ್ರಿಡ್ಜ್ ಹತ್ತಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ಸಂದರ್ಭ ಪ್ಯಾಸೆಂಜರ್ ರೈಲು ಬರುತ್ತಿದ್ದರೂ ಗಮನಿಸದೆ ನಿರಂತರವಾಗಿ ಫೋಟೋ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬಳು ವಿದ್ಯಾರ್ಥಿನಿ ರೈಲು ಢಿಕ್ಕಿಯಾಗುವುದನ್ನು ತಪ್ಪಿಸಿಕೊಳ್ಳಲು ನದಿಗೆ ಹಾರಿ ಗಂಭೀರ ಗಾಯಗೊಂಡಿದ್ದಾಳೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.