ಬೆಂಗಳೂರು, ಜ 28 ( Daijiworld News/MB) : ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಹತ್ತಿರವಾಗುತ್ತಿದ್ದು ಅವರಲ್ಲಿ ಹಲವಾರು ಭಯ, ಸಂದೇಹಗಳು ಇರುತ್ತದೆ. ಅವರ ಸಂದೇಹವನ್ನು ಬಗೆಹರಿಸುವ ಹಿನ್ನಲೆಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರೊಂದಿಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ.
ಈ ಫೋನ್ ಇನ್ ಕಾರ್ಯಕ್ರಮ ಇಂದು ಸಂಜೆ 5 ಗಂಟೆಯಿಂದ 6.30ರ ವರೆಗೂ ನಡೆಯಲಿದ್ದು ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಕರೆ ಮಾಡಿ ಅಹವಾಲು, ಸಲಹೆ ಮತ್ತು ಸೂಚನೆಗಳನ್ನು ಪಡೆಯಬಹುದಾಗಿದೆ.
ವಾರ್ಷಿಕ ಪರೀಕ್ಷೆಗೆ ಸಂಬಂಧಪಟ್ಟಂತೆ ಇರುವಂತಹ ಸಂದೇಹಗಳನ್ನು ನಿವಾರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಈ ಬಾರಿ ವಿಶೇಷವಾಗಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿ ಜೊತೆಗೆ ಪೋಷಕರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕರೆ ಮಾಡಲು ಇಲಾಖೆ 08026725654-08026725655 ಈ ನಂಬರ್ ನೀಡಿದೆ.