ಕೋಲ್ಕತಾ, ಜ 28 ( Daijiworld News/MB) : ಶಂಕಿತ ಕೊರೋನಾ ವೈರಸ್ ಸೋಂಕಿನಿಂದಾಗಿ ಪಶ್ಚಿಮ ಬಂಗಾಳದ ಕೋಲ್ಕತಾದ ಖಾಸಗಿ ಆಸ್ಪತ್ರೆಯಲ್ಲಿ ಥಾಯ್ಲೆಂಡ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಈತ ಕಳೆದ ನವೆಂಬರ್ನಿಂದ ಕೋಲ್ಕತ್ತಾದಲ್ಲಿ ನೆಲೆಸಿದ್ದು ನಗರದ ಖಾಸಗಿ ಆಸ್ಪತ್ರೆಗೆ ಉಸಿರಾಟದ ತೊಂದರೆಯಿಂದ ದಾಖಲಾಗಿದ್ದ. ಬಳಿಕ ಆತನಿಗೆ ಹೊಟ್ಟೆ ನೋವು, ವಾಕರಿಕೆ ಮತ್ತು ಜ್ವರದ ಇದ್ದ ಹಿನ್ನಲೆಯಲ್ಲಿ ಆತನನ್ನು ಚಿಕಿತ್ಸೆಗಾಗಿ ಐಸಿಯುಗೆ ವರ್ಗಾವಣೆ ಮಾಡಲಾಗಿತ್ತು.
ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಅಧಿಕಾರಿಗಳು ಮೃತ ವ್ಯಕ್ತಿಯ ಎಲ್ಲಾ ಆರೋಗ್ಯ ಪರೀಕ್ಷೆಗಳ ವರದಿಯನ್ನು ಕೇಳಿದ್ದಾರೆ.
ಸರ್ಕಾರಿ ಬೆಲಿಯಾಘಾಟಾ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಮುಖ್ಯವಾದ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅದರ ಫಲಿತಾಂಶ ಇನ್ನಷ್ಟೆ ಬರಬೇಕಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.