ಮುಂಬೈ, ಜ 29 (Daijiworld News/MB) : ಸರಕಾರಿ ಬಸ್ ಮತ್ತು ಆಟೋಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ರಸ್ತೆ ಬದಿಯಲ್ಲಿದ್ದ ಬಾವಿಗೆ ಬಿದ್ದಿದ್ದು ಈ ಭೀಕರ ಅಪಘಾತದಲ್ಲಿ 20 ಜನರು ಮೃತಪಟ್ಟ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಮಂಗಳವಾರ ನಡೆದಿದೆ.
ಈ ಅಪಘಾತದಿಂದಾಗಿ ಸುಮಾರು 18 ಮಂದಿ ಗಾಯಗೊಂಡಿದ್ದು ಗಾಯಗೊಂಡವರು ಎಲ್ಲರೂ ಬಸ್ ಪ್ರಯಾಣಿಕರು ಎಂದು ತಿಳಿದು ಬಂದಿದೆ.
ಈ ಅಪಘಾತಕ್ಕೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ.
ಮಂಗಳವಾರ ರಾತ್ರಿ ಸಮಯದಲ್ಲಿ ಬಾವಿಯಿಂದ 20 ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಬಸ್ ಡ್ರೈವರ್ ಕೂಡಾ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಮೃತರ ಕುಟುಂಬಿಕರಿಗೆ ಮಹಾರಾಷ್ಟ್ರ ಸರಕಾರ ಹತ್ತು ಲಕ್ಷ ಪರಿಹಾರ ಘೋಷಿಸಿದೆ.