ನವದೆಹಲಿ, ಜ 30 (Daijiworld News/MB) : ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿ ಕಳೆದ ತಿಂಗಳು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ 2017 ರಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ,ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿ ಬಲೀಕ ಹೊರಬಂದಿದ್ದು ಬುಧವಾರ ತಡರಾತ್ರಿ ಮುಂಬೈನಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಅವರು ಕಳೆದ ತಿಂಗಳು ಅಲಿಗಡ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಮೇಲೆ ಡಿಸೆಂಬರ್ನಲ್ಲಿ ಎಫ್ಐಆರ್ ದಾಖಲಾಗಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದು ಮುಂಬೈ ಪೊಲೀಸರ ಸಹಾಯದಿಂದ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.