ಬೆಂಗಳೂರು, ಜ 30 (Daijiworld News/MB) : ರಾಜ್ಯದಲ್ಲಿ ಭಾರೀ ಚರ್ಚೆಯ ವಿಷಯವಾಗರುವ ಸಂಪುಟ ವಿಸ್ತರಣೆ ಶುಕ್ರವಾರ ಆಗುವುದು ಖಚಿತವೆಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ತಿಳಿಸಿದ್ದಾರೆ.
ಅವರು ನವದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, "ಇಂದು ರಾತ್ರಿ 10 ಗಂಟೆಗೆ ಕೇಂದ್ರ ಗೃಹ ಸಚಿವರ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಅವರಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ ಬಳಿಕ ಸಾಧ್ಯವಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡುತ್ತೇನೆ" ಎಂದು ಹೇಳಿದ್ದಾರೆ.
ನಾಳೆ ನಾನು ದೆಹಲಿಯಿಂದ ಬಂದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ನಾಳೆ ವಿಸ್ತರಣೆ ಮಾಡಲಾಗುತ್ತದೆ ಎಂಬುದರ ಬಗ್ಗೆ ನನಗೆ ಶೇಕಡಾ 99ರಷ್ಟು ವಿಶ್ವಾಸವಿದೆ ಎಂದು ಅವರು ತಿಳಿಸಿದರು.