ನವದೆಹಲಿ, ಫೆ.01 (Daijiworld News/PY): ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಠಾಕೂರ್ ಶನಿವಾರ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾನೆ ಎಂದು ವರದಿಯಾಗಿದೆ.
ನಿರ್ಭಯಾ ಪ್ರಕರಣದ ಮತ್ತೋರ್ವ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಶನಿವಾರ ಬೆಳಿಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದು, ಇದಾದ ಕೆಲವೇ ಕ್ಷಣದಲ್ಲಿ ಅಕ್ಷಯ್ ಠಾಕೂರ್ ಕ್ಷಮಾದಾನ ಅರ್ಜಿ ನೀಡಿದ್ದಾನೆ ಎಂದು ವರದಿಯಾಗಿದೆ.
ನಿರ್ಭಯಾ ಪ್ರಕರಣದ ಆರೋಪಿಗಳು ಶನಿವಾರ ಬೆಳಿಗ್ಗೆ ಗಲ್ಲಿಗೇರಬೇಕಾಗಿತ್ತು. ಆದರೆ ಶುಕ್ರವಾರ ದೆಹಲಿ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ವಿಧಿಸಿರುವ ಗಲ್ಲುಶಿಕ್ಷೆಯನ್ನು ಮುಂದೂಡಿದೆ.
ಅಪರಾಧಿಗಳಾದ ಮುಖೇಶ್ ಸಿಂಗ್ ಹಾಗೂ ವಿನಯ್ ಶರ್ಮಾ ಅವರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ಧಾರೆ.