ನವದೆಹಲಿ, ಫೆ. 01 (Daijiworld News/MB) : ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್ಐಸಿ) ಸರ್ಕಾರದ ಸ್ವಲ್ಪ ಪಾಲು ಮಾರಾಟಕ್ಕೆ ನಿರ್ಧಾರಿಸಿದ್ದು, ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವ ಕುರಿತು ನಿರ್ಧಾರ ಮಾಡಿದೆ.
ಈ ಕುರಿತಂತೆ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದು ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವ ಕುರಿತು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಈ ಹಿಂದೆ ಅವರು ಜೀವ ವಿಮಾ ಸಂಸ್ಥೆ ಸಂಕಷ್ಟದಲ್ಲಿದೆ ಎಂದು ಹೇಳಿದ್ದು ಈಗ ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್ಐಸಿ) ಸರ್ಕಾರದ ಸ್ವಲ್ಪ ಪಾಲು ಮಾರಾಟಕ್ಕೆ ನಿರ್ಧರಿಸಲಾಗಿದೆ. ಅಲ್ಲದೆ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಹಾಗೆಯೇ ಬ್ಯಾಂಕ್ ಠೇವಣಿದಾರರ ವಿಮೆ 1 ಲಕ್ಷದಿಂದ 5 ಲಕ್ಷ ರೂಗೆ ಹೆಚ್ಚಳ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಐಡಿಬಿಡಿ ಬ್ಯಾಂಕ್ನ ಸಂಪೂರ್ಣ ಖಾಸಗೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.