ನವದೆಹಲಿ, ಫೆ.01 (Daijiworld News/PY) : ಕೇಂದ್ರ ಸರ್ಕಾರದ 2020-21 ನೇ ಸಾಲಿನ ಬಜೆಟ್ ಮಂಡನೆಯನ್ನು ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ್ದು, ಯಾವೆಲ್ಲ ವಸ್ತುಗಳ ಬೆಲೆ ಏರಿಕೆಯಾಗಿದೆ ಹಾಗೂ ಇಳಿಕೆ ಮಾಡಲಾಗಿದೆ ಎಂಬ ವಿವರ ಇಲ್ಲಿದೆ.
ಏರಿಕೆ :
- ಪೆಟ್ರೋಲ್, ಡೀಸೆಲ್, ಚಿನ್ನ ದರ ಏರಿಕೆ ಆಗಲಿದೆ
- ಗೃಹ ಉಪಯೋಗಿ ವಸ್ತುಗಳ ಮೇಲಿನ ಜಿಎಸ್ಟಿ
- ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮೇಲೆನ ತೆರಿಗೆ
- ಚೀನಾ ಸೆರಾಮಿಕ್, ಜೇಡಿ ಮಣ್ಣಿನಿಂದ ತಯಾರಿಸಿದ ಗೃಹ ಉಪಯೋಗಿ ವಸ್ತುಗಳ ಮೇಲಿನ ತೆರಿಗೆ
- ಗೃಹ ಉಪಯೋಗಿ ವಸ್ತುಗಳ ಮೇಲಿನ ಜಿಎಸ್ಟಿ ಶೇ.10ರಿಂದ ಶೇ. 20ರಷ್ಟು ಏರಿಕೆ
- ಪಿಂಗಾಣಿ ಕಪ್, ಮಗ್, ತಾಮ್ರ, ಸ್ಟೀಲ್ ಪಾತ್ರೆಗಳ ಮೇಲಿನ ತೆರಿಗೆ ಏರಿಕೆ.
- ವಾಣಿಜ್ಯ ವಾಹನಗಳ ಬಿಡಿ ಭಾಗಗಳ ಮೇಲಿನ ತೆರಿಗೆ ಹಾಗೂ ವಾಣಿಜ್ಯ ವಾಹನಗಳ ಮೇಲಿನ ತೆರಿಗೆ
- ಆಟೋ, ಬೈಕ್, ಕಾರು ದುಬಾರಿ
- ಚಪ್ಪಲಿ, ಫರ್ನಿಚರ್ ದುಬಾರಿ
- ಪೀಠೋಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳ ದರ ಏರಿಕೆ
- ಕೆನೆ ತೆಗೆದ ಹಾಲಿನ ಉತ್ಪನ್ನಗಳು ಇನ್ನು ಮುಂದೆ ತುಟ್ಟಿಯಾಗಲಿವೆ
- ಸಕ್ಕರೆ ಬೆಲೆ ಏರಿಕೆ
- ಸೋಯಾ ಫೈಬರ್ ಉತ್ಪನ್ನಗಳ ದರ ಏರಿಕೆ
- ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ಏರಿಕೆ
ಇಳಿಕೆ :
- ನ್ಯೂಸ್ ಪ್ರಿಂಟ್ಗಳ ದರ ಇಳಿಕೆ
- ಹಗುರ ಕೋಟೆಡ್ ಕಾಗಗದ ದರ ಇಳಿಕೆ