ನವದೆಹಲಿ, ಫೆ 02 (Daijiworld News/MB) : ನಿರ್ಭಯಾ ಅತ್ಯಾಚಾರಿಗಳ ಗಲ್ಲುಶಿಕ್ಷೆಗೆ ತಡೆ ನೀಡಿದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೇಂದ್ರ ಸರಕಾರ ಶನಿವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅಪರಾಹ್ನ 3 ಗಂಟೆಗೆ ಈ ನಾಲ್ವರೂ ಅಪರಾಧಿಗಳ ಗಲ್ಲು ಶಿಕ್ಷೆ ಸಮಯವನ್ನು ದೆಹಲಿ ಹೈಕೋರ್ಟ್ ತೀರ್ಮಾನ ಮಾಡಲಿದೆ.
ಸರಕಾರವು ಈ ಶಿಕ್ಷೆ ವಿಳಂಬವಾಗುತ್ತಿರುವುದು ಸರಿಯಲ್ಲ ಎಂದು ಹೈಕೋರ್ಟ್ಗೆ ಹೇಳಿದೆ.
ಈ ಹಿಂದೆ ದೆಹಲಿ ಕೋರ್ಟ್ ಫೆ.1 ರಂದು ಗಲ್ಲು ಶಿಕ್ಷೆ ನೀಡಲು ಡೆತ್ ವಾರಂಟ್ ಹೊರಡಿಸಿತ್ತು. ಆದರೆ ಅಪರಾಧಿಗಳಿಗೆ ಕಾನೂನಾತ್ಮಕ ಅವಕಾಶಗಳು ಬಾಕಿ ಉಳಿದಿರುವ ಹಿನ್ನಲೆಯಲ್ಲಿ ಶುಕ್ರವಾರ ಕೋರ್ಟ್ ಗಲ್ಲುಶಿಕ್ಷೆ ಜಾರಿಗೆ ತಡೆ ನೀಡಿತ್ತು.
ಈ ನಡುವೆ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಶನಿವಾರ ರಾಷ್ಟ್ರಪತಿ ಕೋವಿಂದ್ ಅವರು ತಿರಸ್ಕರಿಸಿದ್ದಾರೆ. ಹಾಗೆಯೇ ಇನ್ನೋರ್ವ ಅಪರಾಧಿ ಅಕ್ಷಯ್ ಠಾಕೂರ್ ಸಹ ಕ್ಷಮಾದಾನ ಕೋರಿ ಅರ್ಜಿ ಸಲ್ಲಿದ್ದಾನೆ.