ಬೆಂಗಳೂರು, ಫೆ.02 (Daijiworld News/PY) : ಅಂತಿಮವಾಗಿ ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾಗಿದ್ದು, "ಫೆ.6 ಗುರುವಾರದಂದು ಬೆಳಗ್ಗೆ 10:30ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ವೈ ಅವರು, "ಅಮಿತ್ ಶಾ ಅವರು ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ದೊರಕಿದ್ದು, ಅದರಂತೆಯೇ ಫೆ.6 ಗುರುವಾರದಂದು ಬೆಳಗ್ಗೆ 10:30ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ 10 ಶಾಸಕರಿಗೆ ಸಚಿವ ಸ್ಥಾನ ನೀಡುತ್ತೇವೆ" ಎಂದು ಹೇಳಿದರು.
ಸುಪ್ರೀಂಕೋರ್ಟ್ನ ತೀರ್ಪಿನ ಪ್ರಕಾರ ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.