ಬೆಂಗಳೂರು, ಫೆ.03 (Daijiworld News/PY) : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ವಿರುದ್ದ ಹೇಳಿಕೆ ನೀಡಿದ್ದ ಬಿಜೆಪಿಯ ಮುಖಂಡ ಅನಂತಕುಮಾರ್ ಹೆಗಡೆ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮಾ ಗಾಂಧಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಈ ಹಿಂದೆ ಅನಂತ್ ಕುಮಾರ್ ಹೆಗಡೆ ಅವರು ಗಾಂಧಿ ಕೊಂದ ನಾಥೂರಾಮ್ ಗೋಡ್ಸೆ ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದು, ಬಳಿಕ ತಮ್ಮ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಖಾತೆ ಹ್ಯಾಕ್ ಅಗಿತ್ತು ಎಂದು ಸಮರ್ಥನೆ ನೀಡಿದ್ದರು.
ಈಗ ಗಾಂಧಿ ಅಂಥವರನ್ನು ''ಮಹಾತ್ಮ" ಎಂದು ಭಾರತದಲ್ಲಿ ಏಕೆ ಕರೆಯುತ್ತಾರೆ. ಗಾಂಧಿ ನಡೆಸಿದ ಸ್ವಾತಂತ್ರ್ಯ ಹೋರಾಟವನ್ನು ದೊಡ್ಡ ನಾಟಕ ಎಂದು ಹೇಳಿದ್ದಾರೆ.
ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಈ ನಾಯಕರನ್ನು ಪೊಲೀಸರು ಎಂದು ಮುಟ್ಟಿಲ್ಲ. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಪ್ರತಿಭಟನೆ ನಾಟಕ ನಡೆಸಲಾಗಿತ್ತು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವೇ ಅಲ್ಲ, ಅನುಕೂಲ ಸ್ವಾತಂತ್ರ್ಯ ಚಳವಳಿ ಎಂದು ಅನಂತಕುಮಾರ್ ಹೇಳಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಗಾಂಧಿ ಅವರು ನಡೆಸಿದ ಅಮರಣಾಂತ ಉಪವಾಸ ಸತ್ಯಾಗ್ರಹವೇ ಕಾರಣ ಎಂದು ಬಿಂಬಿಸಲಾಗಿದೆ. ಆದರೆ ಇದು ಸತ್ಯವಲ್ಲ, ಸತ್ಯಾಗ್ರಹದಿಂದ ಬ್ರಿಟಿಷರು ಭಾರತವನ್ನು ತೊರೆಯಲಿಲ್ಲ. ಭಾರತದ ಇತಿಹಾಸ ಓದಿದರೆ ನನ್ನ ರಕ್ತಕುದಿಯುತ್ತದೆ. ಹೇಗೆ ಇಂಥವರನ್ನು ಮಹಾತ್ಮ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮ ಗಾಂಧೀಜಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಅನಂತ್ ಕುಮಾರ ಹೆಗಡೆ ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಆಗ್ರಹಿಸಿದ್ದಾರೆ.