ನವದೆಹಲಿ, ಫೆ 03 (Daijiworld News/MB) : "ಆಮ್ ಆದ್ಮಿ ಪಕ್ಷದ ಹೆಸರನ್ನು ಮುಸ್ಲಿಂ ಲೀಗ್ ಎಂದು ಬದಲಿಸಬೇಕು" ಎಂದು ಮಾಡೆಲ್ ಟೌನ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ ಮಾಡಿರುವ ಮಿಶ್ರಾ ಅವರು, "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹಮ್ಮದ್ ಅಲಿ ಜಿನ್ನಾ ರೀತಿ ರಾಜಕೀಯ ಮಾಡುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಹೆಸರನ್ನು ಮುಸ್ಲಿಂ ಲೀಗ್ ಎಂದು ಬದಲಾಯಿಸಿಕೊಳ್ಳುವುದು ಅಗತ್ಯವಿದೆ" ಎಂದು ಹೇಳಿದ್ದಾರೆ.
"ಹಾಗೆಯೇ ಉಗ್ರರು ಎಂದು ಪರಿಗಣಿಸಲ್ಪಟ್ಟಿದ್ದ ಅಫ್ಜಲ್ ಗುರು, ಬುರ್ಹಾನ್ ವಾನಿ ಹಾಗೂ ಉಮರ್ ಖಾಲಿದ್ ಅವರ ಅಪ್ಪನೂ ಕೂಡಾ ಯೋಗಿ ಆದಿತ್ಯನಾಥ್ ಅವರಿಗೆ ಹೆದರಬೇಕು" ಎಂದು ಮಿಶ್ರಾ ಹೇಳಿದ್ದಾರೆ.
ಗಲಭೆಕೋರರು ಮತ್ತು ಪ್ರತಿಭಟನಾಕಾರರ ವಿರುದ್ಧ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಕಠಿಣ ಕ್ರಮತೆಗೆದುಕೊಂಡಿದ್ದಾರೆ. ಅವರ ಈ ಕ್ರಮಗಳು ಈ ದೇಶದ ಜನರ ಕೈಗನ್ನಡಿಯಂತಿದೆ. ಆದರೆ ಕೇಜ್ರಿವಾಲ್ ಅವರು ಜಿನ್ನಾ ರೀತಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಟೀಕೆ ಮಾಡಿದ್ದಾರೆ.
ಚುನಾವಣಾ ಆಯೋಗಕ್ಕೆ ಆಪ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೆಹಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದು ತಡೆಯಬೇಕು ಎಂದು ಒತತಾಯ ಮಾಡಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಆಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.