ನವದೆಹಲಿ, ಫೆ.05 (Daijiworld News/PY) : ಇನ್ನೊಂದು ವಾರದಲ್ಲಿ ನಿರ್ಭಯಾ ಅಪರಾಧಿಗಳು ತಮಗಿರುವ ಕಾನೂನಿನ ಅವಕಾಶಗಳನ್ನು ಪೂರ್ಣಗೊಳಿಸಬೇಕು. ಯಾವುದೇ ಅರ್ಜಿ ಇದ್ದರೂ ಒಂದು ವಾರದೊಳಗೆ ಸಲ್ಲಿಸಬೇಕು ಎಂದು ದೆಹಲಿ ಹೈಕೋರ್ಟ್ ಬುಧವಾರ ತಿಳಿಸಿದೆ.
ನಿರ್ಭಯಾ ಅಪರಾಧಿಗಳಿಗೆ ಮರಣದಂಡನೆ ಜಾರಿ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ದೆಹಲಿಯ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ತಡೆಹಿಡಿಯುಂತೆ ದೆಹಲಿ ಹಾಗೂ ಕೇಂದ್ರ ಸರ್ಕಾರಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೇತ್ ಅವರಿದ್ದ ಪೀಠ, ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ್ದು, ಒಂದು ವಾರದೊಳಗೆ ಅಪರಾಧಿಗಳು ತಮಗಿರುವ ಕಾನೂನಿನ ಅವಕಾಶಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿತ್ತು.
ನಿರ್ಭಯಾ ಪ್ರಕರಣ ಆರೋಪಿಗಳನ್ನು ಒಟ್ಟಾಗಿಯೇ ಗಲ್ಲಿಗೇರಿಸಬೇಕು. ಒಬ್ಬೊಬ್ಬರಿಗೂ ಪ್ರತ್ಯೇಕವಾಗಿ ಶಿಕ್ಷೆ ಜಾರಿ ಮಾಡಲಾಗುವುದಿಲ್ಲ ಎಂದು ಸೂಚಿಸಿತ್ತು.