ಬೆಂಗಳೂರು, ಫೆ 06 (Daijiworld News/MB) : 252.71 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ ಕೈಗೆತ್ತಿಕೊಂಡಿದೆ.
ಹಾಗೆಯೇ ಮಂಗಳೂರು ವಿಮಾನ ನಿಲ್ದಾಣದಲ್ಲಿ ಏರೋ ಬ್ರಿಡ್ಜ್ಗಳ ನಿರ್ಮಾಣವೂ ಆಗಲಿದೆ.
ಬುಧವಾರ ರಾಜ್ಯಸಭೆಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಈ ಕುರಿತು ಪ್ರಶ್ನಿಸಿದ್ದು ಇದಕ್ಕೆ ಲಿಖಿತ ರೂಪದಲ್ಲಿ ಉತ್ತರಿಸಿದ ಕೇಂದ್ರ ನಾಗರಿಕ ವಿಮಾನಯಾಣ ಸಚಿವರು ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ವಿಸ್ತರಣೆಯು 2020 ರ ಡಿಸೆಂಬರ್ ಮೊದಲು ಸಂಪೂರ್ಣವಾಗಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
2017 ಹಾಗೂ 2019 ರಲ್ಲಿ ಮುಂಗಾರು ಮಳೆಯಲ್ಲಿ ಉಂಟಾದ ಬದಲಾವಣೆಯಿಂದಾಗಿ ಈ ಅಭಿವೃದ್ಧಿ ಕಾರ್ಯ ವಿಳಂಬವಾಗಿದೆ. ಹಾಗೆಯೇ ವಿಮಾನ ನಿಲ್ದಾಣದ ಗಡಿ ಗೋಡಯಾಚೆ ಇರುವ ಒಳಚರಂಡಿ ವ್ಯವಸ್ಥೆ ಹಾಗೂ ಆಳವಾದ ಒಸರು ಹಾಗೂ ಇಳಿಜಾರಿನ ವೈಫಲ್ಯದಿಂಗಾಗಿ ಗೋಡೆಯ ಪರಿಷ್ಕರಣೆಯ ಕಾರಣದಿಂದಾಗಿ ಅಭಿವೃದ್ಧಿ ಕಾರ್ಯ ವಿಳಂಬವಾಗಿದೆ ಎಂದು ಅವರು ಹೇಳಿದರು.