ನವದೆಹಲಿ, ಫೆ 6 (DaijiworldNews/SM): ಉಗ್ರರಿಗೆ ಬಿರಿಯಾನಿ ಹೇಳಿಕೆ ಆರೋಪದ ಮೇರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಂಕಷ್ಟ ಎದುರಾಗಿದೆ. ಈ ಹೇಳಿಕೆಗೆ ಚುನಾವಣಾ ಆಯೋಗ ಇಂದು ಶೋಕಾಸ್ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.
ಈಗಾಗಲೇ ನೋಟಿಸ್ ನೀಡಿರುವ ಕೋರ್ಟ್ ಈ ಸಂಬಂಧ ಶುಕ್ರವಾರ ಸಂಜೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಯೋಗಿ ಆದಿತ್ಯನಾಥ್ ಅವರಿಗೆ ಸೂಚನೆ ನೀಡಲಾಗಿದೆ. ಚುನಾವಣಾ ನೀತಿ ಸಂಹಿತಿ ಉಲ್ಲಂಘನೆ ಆರೋಪ ಅವರ ಮೇಲಿದೆ.
ದೆಹಲಿ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಫೆಬ್ರವರಿ 1 ರಂದು ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್ ಈ ಹೇಳಿಕೆ ನೀಡಿದ್ದರು.