ನವದೆಹಲಿ, ಫೆ 10 (Daijiworld News/MB) : ದೆಹಲಿಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳನ್ನು ಒಪ್ಪದ ಕಾಂಗ್ರೆಸ್ ಸರ್ಕಾರ ಹಿಂದಿಗಿಂತಲೂ ಈ ಬಾರಿ ಉತ್ತಮ ಕಾರ್ಯ ನಿರ್ವಹಿಸಿದೆ. ಆದರೆ ನಾವು ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಿಲ್ಲ ಎಂದು ಹೇಳಿದೆ.
ಈ ಕುರಿತಾಗಿ ಕಾಂಗ್ರೆಸ್ನ ದೆಹಲಿಯ ಕಾಂಗ್ರೆಸ್ ಮುಖಂಡರಾದ ಪಿ.ಸಿ.ಚಾಕೋ ಹಾಗೂ ಕೀರ್ತಿ ಅಜಾದ್ ಅವರು ಹೇಳಿದ್ದಾರೆ. ಛತ್ತೀಸ್ಘಡ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಇದೇ ರೀತಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿತ್ತು. ಆದರೆ, ಕಾಂಗ್ರೆಸ್ ಸಮೀಕ್ಷೆಗಳನ್ನು ಮೀರಿ ಉತ್ತಮ ಸ್ಥಿತಿಯಲ್ಲಿತ್ತು. ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಹೇಳುತ್ತಿಲ್ಲ. ಆದರೆ, ಹಿಂದಿಗಿಂತ ಉತ್ತಮ ಸ್ಥಿತಿಯಲ್ಲಿರುತ್ತೇವೆ ಎಂದು ಚಾಕೋ ಅಭಿಪ್ರಾಯಪಟ್ಟಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ ಇದೇ ರೀತಿಯಾಯಿತು. ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಹರಿಯಾಣದಲ್ಲಿ ಕೇವಲ 3 ಸ್ಥಾನಗಳನ್ನು ಪಡೆಯುತ್ತದೆ ಎಂದು ಇದ್ದವು. ಆದರೆ 31 ಸ್ಥಾನಗಳನ್ನು ಪಡೆದೆವು. ಅದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ, ಈ ಮೂರು ರಾಜ್ಯಗಳಲ್ಲಿ ನಾವು ಸರ್ಕಾರ ರಚನೆ ಮಾಡಿದೆವು. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯುವ ವಿಶ್ವಾಸವಿದೆ ಎಂದು ಕೀರ್ತಿ ಹೇಳಿದ್ದಾರೆ.