ಮೈಸೂರು, ಫೆ 11 (Daijiworld News/MSP): ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಗೆ ಲಘು ಹೃದಯಾಘಾತ ಸಂಭವಿಸಿದ್ದು, ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅವರು ರಾತ್ರಿ ಒಂಟಿಕೊಪ್ಪಲಿನ ಮನೆಯಲ್ಲಿದ್ದ ತಂಗಿದ್ದ ವೇಳೆ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡುತ್ತಿದ್ದ ವೈದ್ಯಾಧಿಕಾರಿಗಳು ರಾಮದಾಸ್ ಲಘು ಹೃದಯಾಘಾತವಾಗಿದೆ ಎಂದು ತಿಳಿಸಿರುವುದಾಗಿ ತಿಳಿದುಬಂದಿದೆ.
ಖಾಸಗಿ ಆಸ್ಪತ್ರೆಯಲ್ಲಿ ರಾಮದಾಸ್ ಅವರಿಗೆ ನುರಿತ ವೈದ್ಯರು ಆ್ಯಂಜಿಯೊ ಪ್ಲಾಸ್ಟ್ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.