ಕಾಶ್ಮೀರ, ಫೆ.13 (DaijiworldNews/PY): ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ಆರೋಗ್ಯ ಸ್ಥಿತಿ ವಿಚಾರವಾಗಿ ವದಂತಿ ಹರಿದಾಡದಂತೆ ನಿಯಂತ್ರಿಸಲು ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
90ರ ಹರೆಯದ ಗಿಲಾನಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪೋಸ್ಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ತಡರಾತ್ರಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಯನ್ನು ನಿಯೋಜನೆಗೊಳಿಸಲಾಗಿದೆ.
ಗಿಲಾನಿಯವರು ಕೆಲ ಕಾಲ ಅನಾರೋಗ್ಯದಿಂದಿದ್ದರು ಆದರೆ ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬ ತಿಳಿಸಿವೆ.