ಶಿವಮೊಗ್ಗ, ಫೆ 13 (Daijiworld News/MB) : ನೂತನ ಸಚಿವರುಗಳಿಗೆ ಈ ಮೊದಲು ನೀಡಿದ್ದ ಖಾತೆ ಇಷ್ಟವಿಲ್ಲದ ಹಿನ್ನಲೆಯಲ್ಲಿ ಬಳಿಕ ಖಾತೆ ಬದಲಾವಣೆ ಮಾಡಲಾಗಿದೆ. ಮುಂದೆ ಸೋತವರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಖಾತೆ ಪಡೆದಿದ್ದ ಸಚಿವರುಗಳು ಆ ಖಾತೆ ಬಗ್ಗೆ ಸಿಎಂ ಬಳಿ ಬಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಖಾತೆಗಳನ್ನು ಬದಲಾಯಿಸಿ ಕೊಟ್ಟಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆಯಿಲ್ಲ. ಎಲ್ಲರೂ ತೃಪ್ತಿಕರವಾಗಿದ್ದಾರೆ ಎಂದರು.
ಮುಖ್ಯಮಂತ್ರಿಯವರು ಎಲ್ಲರನ್ನೂ ಜೊತೆಯಾಗಿ ಕೊಂಡೊಯ್ಯುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಎಲ್ಲರಲ್ಲೂ ಸಚಿವರಾಗುವ ಆಸೆಯಿದೆ. ಈಗ ಆಗಿರುವ ಬಗ್ಗೆ ಗಮನ ಹರಿಸುವುದು ಮುಖ್ಯ. ಸೂಕ್ತ ಸಂದರ್ಭದಲ್ಲಿ ಮುಖ್ಯಮಂತ್ರಿ ಕ್ರಮಕೈಗೊಳ್ಳುತ್ತಾರೆ. ಸೋತವರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದರು.