ಉತ್ತರ ಪ್ರದೇಶ, ಫೆ.13 (DaijiworldNews/PY): ಲಕ್ನೋ ನ್ಯಾಯಾಲಯದಲ್ಲಿ ವಕೀಲರನ್ನು ಗುರಿಯಾಗಿಸಿಕೊಂಡು ಸಜೀವ ಬಾಂಬ್ ಸ್ಪೋಟಿಸಲಾಗಿದ್ದು, ಘಟನೆಯಲ್ಲಿ ಅನೇಕ ವಕೀಲರು ಗಾಯಗೊಂಡಿದ್ದಾರೆ.
ಬಾಂಬ್ ಸ್ಪೋಟ ಘಟನೆ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಗೊಂಡ ವಕೀಲರನ್ನು ತಕ್ಷಣಕ್ಕೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವಸಿರ್ಗಂಜ್ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಮೂರು ಸಜೀವ ಬಾಂಬ್ ಪತ್ತೆಯಾಗಿದೆ.
ಇಲ್ಲಿನ ಜಿಲ್ಲಾ ನ್ಯಾಯಾಲಯದ ವಕೀಲ ಸಂಜೀವ್ ಲೋದಿ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಘಟನೆಯಲ್ಲಿ ಕೆಲವೇ ಅಂತರದಲ್ಲಿ ಲೋದಿ ಪಾರಾಗಿದ್ದಾರೆ.
ಬಾಂಬ್ ಸ್ಪೋಟಿಸಿದ ವ್ಯಕ್ತಿಯನ್ನು ಜೀತು ಯಾದವ್ ಎಂದು ಗುರುತಿಸಲಾಗಿದ್ದು, ಈತ ಕಚ್ಛಾ ಸಾಮಾಗ್ರಿ ಬಳಸಿ ಈ ಸ್ಪೋಟ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.