ನವದೆಹಲಿ, ಫೆ.13 (DaijiworldNews/PY): ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಇದೇ ಪ್ರಥಮ ಬಾರಿಗೆ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ತೀರ್ಮಾನಿಸಿರುವುದಾಗಿ ವರದಿ ತಿಳಿಸಿದೆ.
ಮಾರ್ಚ್ ತಿಂಗಳಿನಲ್ಲಿ ಸುಮಾರು 8 ಹಂತಗಳ ಬ್ಯಾಲೆಟ್ ಬಾಕ್ಸ್ಗಳನ್ನು ಉಪಯೋಗಿಸಿ ಪ್ರತಿಯೊಂದು ಬ್ಯಾಂಕ್ಗಳಲ್ಲಿನ ಸದಸ್ಯರ ಆಯ್ಕೆಗಾಗಿ ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಜಮ್ಮು-ಕಾಶ್ಮೀರ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ಹೇಳಿದ್ದಾರೆ.
ಮಾರ್ಚ್ 5,7,9,12,14,16,18 ಹಾಗೂ 20ರಂದು ಪಂಚಾಯತ್ ಚುನಾವಣೆ ನಡೆಯಲಿದೆ. ಫೆಬ್ರುವರಿ 15ರಂದು ಮೊದಲ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪ್ರಮುಖ ರಾಜಕೀಯ ಚುನಾವಣೆ ಇದಾಗಿದ್ದು, ಲಡಾಖ್ ಕೂಡಾ ಕೇಂದ್ರಾಡಳಿತ ಪ್ರದೇಶವಾಗಿದೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಆಡಳಿತ ಈಗ ಕೇಂದ್ರದ ಹತೋಟಿಯಲ್ಲಿದೆ. ಅಲ್ಲದೇ ಜಿಸಿ ಮುರ್ಮು ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದೆ. ಕೇಂದ್ರಾಡಳಿತ ಪ್ರದೇಶದ ಕಾನೂನು ಸುವ್ಯವಸ್ಥೆಯನ್ನು ಕೂಡಾ ಕೇಂದ್ರವೇ ನಿರ್ವಹಿಸುತ್ತಿದೆ ಎಂದು ವರದಿ ತಿಳಿಸಿದೆ.