ಬೆಂಗಳೂರು, ಫೆ 14 (Daijiworld News/MB) : ರಾಜ್ಯ ಸರ್ಕಾರದ ಬಜೆಟ್ ಮಾರ್ಚ್ 5 ರಂದು ಮಂಡನೆಯಾಗಲಿದ್ದು ಈ ಬಾರಿಯ ಅಧಿವೇಶನಕ್ಕೆ ಎಲೆಕ್ಟ್ರಾನಿಕ್ ಮಾಧ್ಯಮಗಳ ಕ್ಯಾಮರಾಗಳಿಗೆ ವಿಧಾನಸಭೆಯ ಒಳಗೆ ಅವಕಾಶವಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಶುಕ್ರವಾರ ಈ ವಿಷಯದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, "ಇಲ್ಲೂ ಕೂಡಾ ಲೋಕಸಭೆ ಹಾಗೂ ರಾಜ್ಯಸಭೆ ಮಾದರಿಯ ವ್ಯವಸ್ಥೆ ಪಾಲನೆ ಮಾಡಲಾಗುತ್ತದೆ ಎಂದು ಹೇಳಿದರು.
ಫೆಬ್ರುವರಿ 17ರಿಂದ 31ರವರಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆ ಆಗಲಿದೆ ಎಂದು ತಿಳಿಸಿದ್ದಾರೆ.
ಒಟ್ಟು 6 ಮಸೂದೆಗಳು ಅಧಿವೇಶನದಲ್ಲಿ ಮಂಡನೆಯಾಗಲಿದ್ದು ಎಲ್ಲಾ ಸದಸ್ಯರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.