ಮುಂಬೈ, ಫೆ 16 (Daijiworld News/MB) : ಒಂದು ಕಾನೂನಿನ ವಿರುದ್ಧವಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರನ್ನು ವಂಚಕರು ಅಥವಾ ದೇಶದ್ರೋಹಿಗಳು ಎಂದು ಕರೆಯಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠ ಹೇಳಿದೆ.
ಈ ಅಭಿಪ್ರಾಯವನ್ನು ಸಿಎಎ ವಿರೋಧಿಸಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ನೀಡಬೇಕೆಂದು ಕೋರಿ ಇಫ್ತೆಕಾರ್ ಶೇಖ್ ಎನ್ನುವವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಪೀಠ ವ್ಯಕ್ತಪಡಿಸಿದೆ.
ಪೊಲೀಸರು ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಶೇಖ್ ಅವರಿಗೆ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದರು.
ಶಾಂತಿಯುತವಾಗಿ ಪ್ರತಿಭಟಿಸುವ ಇಂತಹ ವ್ಯಕ್ತಿಗಳ ಹಕ್ಕನ್ನು ಪರಿಗಣಿಸಬೇಕು. ಕಾನೂನು ವಿರೋಧಿಸುವ ಕಾರಣಕ್ಕಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳಲಾಗದು. ಇದು ಕೇವಲ ಸಿಎಎ ಕಾರಣಕ್ಕಾಗಿ ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆ ಎಂದು ನ್ಯಾಯಮೂರ್ತಿಗಳಾದ ಟಿ.ವಿ. ನಲವಾಡೆ ಹಾಗೂ ಎಂ.ಜಿ. ಸೇವಲಿಕರ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.