ಬೆಂಗಳೂರು, ಫೆ.17 (DaijiworldNews/PY): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ನಿರ್ವಾಹಕ ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರೊಬ್ಬರೊಂದಿಗೆ ಬಸ್ಸಿನ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಿಚಾರವಾಗಿ ಮಹಿಳಾ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ನಿರ್ವಾಹಕನಿಗೆ ಕಪಾಳಮೋಕ್ಷ ಮಾಡಿ ಮಾರ್ಗ ಮಧ್ಯದಲ್ಲಿಯೇ ಬಸ್ಸಿನಿಂದ ಇಳಿದಿದ್ದಾರೆ. ನಿರ್ವಾಹಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಹಿಳೆ ವಿಡಿಯೋ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಬಸ್ಸು ಪುತ್ತೂರು ಡಿಪೋಗೆ ಸೇರಿದ್ದಾಗಿದೆ ಎಂದು ಹೇಳಲಾಗುತ್ತಿದೆ. ಮಹಿಳಾ ಪ್ರಯಾಣಿಕರಿಗೆ ರಕ್ಷಣೆ ನೀಡಬೇಕಾದ ನಿರ್ವಾಹಕರೇ ಇದೀಗ ಕಿರುಕುಳ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಕೆಎಸ್ಆರ್ಟಿಸಿ ಅಧಿಕಾರಿಗಳು ಮಾತ್ರ ಲೈಂಗಿಕ ಕಿರುಕುಳ ನೀಡಿದ ನಿರ್ವಾಹಕನ ವಿರುದ್ದ ಯಾವುದೇ ಕ್ರಮ ತೆಗೆದುಕೊಂಡಿಲ್ಲ.