ಬೆಂಗಳೂರು, ಫೆ.17 (DaijiworldNews/PY): "ಮೀಸಲಾತಿಯನ್ನು ರದ್ದುಪಡಿಸಿದರೆ ಮೂಲಭೂತ ಹಕ್ಕನ್ನು ಕಿತ್ತುಕೊಂಡ ಹಾಗಾಗುತ್ತದೆ. ಇದು ಸಂಪೂರ್ಣ ಸಂವಿಧಾನದ ಆಶಯಕ್ಕೆ ವಿರೋಧಿಯಾದದ್ದು. ಹಾಗಾಗಿ ಕೂಡಲೇ ಈ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೂಲಭೂತ ಹಕ್ಕನ್ನು ಕಿತ್ತುಕೊಂಡ ಹಾಗಾಗುತ್ತದೆ. ಇದು ಸಂಪೂರ್ಣ ಸಂವಿಧಾನದ ಆಶಯಕ್ಕೆ ವಿರೋಧಿಯಾದದ್ದು. ಹಾಗಾಗಿ ಕೂಡಲೇ ಈ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಈ ತೀರ್ಪನ್ನು ಮರುಶೀಲಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಬೇಕು" ಎಂದು ತಿಳಿಸಿದ್ದಾರೆ.
"ಸುಪ್ರೀಂ ಕೋರ್ಟ್ ತೀರ್ಪನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಷ್ಟ್ರಾದ್ಯಂತ ಈ ಕುರಿತು ಪ್ರತಿಭಟನೆ ನಡೆಸಲಾಗುವುದು. ಬಿಜೆಪಿ ಸರ್ಕಾರ ದಲಿತರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿಲ್ಲ. ಅವರಿಗೆ ನಿಜಕ್ಕೂ ಶೋಷಿತರ ಬಗ್ಗೆ ಕಾಳಜಿ ಇದ್ದರೆ, ಕೂಡಲೇ ಈ ವಿಚಾರವಾಗಿ ಅಪೀಲು ಹಾಕಬೇಕು" ಎಂದರು.
"ಮಾಧ್ಯಮದ ಎದುರು ರಾಜ್ಯದ ಜ್ವಲಂತ ಸಮಸ್ಯೆಗಳ ವಿಚಾರವಾಗಿ ಚರ್ಚೆ ನಡೆಸುವುದರಲ್ಲಿ ತಪ್ಪೇನಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಎಂಬುದು ನಾಲ್ಕನೇಯ ಅಂಗ. ಸದನದ ಒಳಗಿನ ಚರ್ಚೆ ಮಾಧ್ಯಮದ ಮುಖಾಂತರ ಜನರಿಗೆ ತಲುಪಬೇಕು. ಹೀಗಾಗಿ ಮಾಧ್ಯಮಗಳನ್ನು ಸದನದ ಒಳಗೆ ನಿರ್ಬಂಧಿಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತೀರ್ಮಾನವನ್ನು ನಾನು ಖಂಡಿಸುತ್ತೇನೆ" ಎಂದು ಹೇಳಿದರು.