ಹುಬ್ಬಳ್ಳಿ, ಫೆ 18 (Daijiworld News/MB) : ಪಾಕ್ ಪರವಾಗಿ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿ, ನ್ಯಾಯಾಂಗ ವಶದಲ್ಲಿರುವ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯಿಂದ ಬೆಳಗಾವಿಗೆ ಸ್ಥಳಾಂತರ ಮಾಡಲಾಗಿದೆ.
ನಗರದ ಉಪಕಾರಾಗೃಹದಲ್ಲಿ ಈ ಆರೋಪಿಗಳನ್ನು ಇರಿಸಲಾಗಿತ್ತು. ಈಗ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಇಂದು ಬೆಳಿಗ್ಗೆ ಸ್ಥಳಾಂತರಿಸಲಾಗಿದೆ.
ಈ ಮೂವರನ್ನು ಅಂದೇರಿ ಸೆಲ್ನಲ್ಲಿ ಇರಿಸಲಾಗಿದ್ದು ಇತರ ಕೈದಿಗಳು ಹಲ್ಲೆ ಮಾಡುವ ಭೀತಿ ಇರುವುದರಿಂದ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹಿಂಡಲಗಾ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಕೃಷ್ಣಕುಮಾರ್ ತಿಳಿಸಿದ್ದಾರೆ.