ನವದೆಹಲಿ, ಫೆ.20 (DaijiworldNews/PY): ಕಾರ್ಯಕಾರಿ ಸಮಿತಿ ಪಕ್ಷದ ನಾಯಕತ್ವ ಸ್ಥಾನಕ್ಕೆ ಚುನಾವಣೆ ನಡೆಸಿ. ಈ ಮುಖಾಂತರ ಪಕ್ಷದ ಶಕ್ತಿಯನ್ನು ವೃದ್ಧಿಸಲಿ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕತ್ವ ವಿಷಯದ ಬಗ್ಗೆ ಪಕ್ಷದಲ್ಲಿ ಮೌನ ಎದ್ದು ಕಾಣುತ್ತಿದೆ ಎಂದು ಸಂದೀಪ್ ದೀಕ್ಷಿತ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಶಶಿ ತರೂರ್ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಇರುವವರು, ಮಾಜಿ ಮುಖ್ಯಮಂತ್ರಿಗಳಾಗಿರುವವರು ಹಾಗೂ ಹಾಲಿ ಮುಖ್ಯಮಂತ್ರಿಗಳಾಗಿ ಇರುವವರಲ್ಲಿ ಹಲವು ಹಿರಿಯರಿದ್ದಾರೆ. ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಇದು ಸಕಾಲ ಎಂಬುದು ನನ್ನ ಭಾವನೆ ಎಂದು ಸಂದೀಪ್ ದೀಕ್ಷಿತ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ ಎಂದು ಸುದ್ದಿಯಾಗಿತ್ತು.
ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಹಾಗೂ ಮತದಾರರನ್ನು ಸೆಳೆಯಲು ಪಕ್ಷದ ನಾಯಕತ್ವ ಸ್ಥಾನಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಶಶಿ ತರೂರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಸೋಲಿನ ನಂತರ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಖಾಲಿಯಾಗಿದ್ದ ಈ ಸ್ಥಾನಕ್ಕೆ ಕಳೆದ ಆಗಸ್ಟ್ನಲ್ಲಿ ಮಧ್ಯಂತರ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ನೇಮಕಗೊಂಡಿದ್ದಾರೆ