ರಾಯಚೂರು, ಫೆ.23 (DaijiworldNews/PY) : "ಮಹೇಶ್ ಕುಮಟಳ್ಳಿ ಅವರಿಗೆ ಅನ್ಯಾಯವಾಗಲ್ಲ" ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಹೇಳಿದ್ದಾರೆ.
ಶಾಸಕ ಮಹೇಶ್ ಕುಮಟಳ್ಳಿಗೆ ಅನ್ಯಾಯವಾದರೇ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿ ಸಿಂಧನೂರನಲ್ಲಿ ಮಾತನಾಡಿದ ಗೋವಿಂದ್ ಕಾರಜೋಳ ಅವರು, "ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಅನ್ಯಾಯವಾಗುವುದಿಲ್ಲ" ಎಂದು ತಿಳಿಸಿದ್ದಾರೆ.
"ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕುಮಟಳ್ಳಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂಬ ಭರವಸೆ ಇದೆ. ಶಾಸಕ ಮಹೇಶ ಕುಮಟಳ್ಳಿಗೆ ಅನ್ಯಾಯ ಆಗಲ್ಲ. ಸಚಿವ ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿಲ್ಲ, ಸರ್ಕಾರ ಸುಭದ್ರವಾಗಿದೆ" ಎಂದರು.
"ಕುಮಟಳ್ಳಿಯಿಂದ ಬಿಜೆಪಿ ಸರ್ಕಾರ ಬಂದಿದೆ. ಅವರಿಗೆ ಉನ್ನತ ಸ್ಥಾನ ಸಿಗಲಿದೆ. ಅವರಿಗೆ ನನ್ನಿಂದ ಅನ್ಯಾಯವಾದಲ್ಲಿ ರಾಜೀನಾಮೆ ನೀಡುತ್ತೇನೆ. ಅವರಿಗೆ ಅನ್ಯಾಯ ಮಾಡುವುದಿಲ್ಲ" ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು.
"ಅದೇ ದೊಡ್ಡ ಸುದ್ದಿಯಾದ ಹಿನ್ನೆಲೆ ಸರಕಾರಕ್ಕೆ ಯಾವುದೇ ರೀತಿ ಬೆದರಿಕೆ ಹಾಕಿಲ್ಲ, ನನ್ನಿಂದ ಅನ್ಯಾಯವಾಗಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದೆ, ಈ ವಿಚಾರವನ್ನೆ ದೊಡ್ಡ ಸುದ್ದಿ ಮಾಡುವ ಅವಶ್ಯಕತೆಯಿಲ್ಲ" ಎಂದು ತಿಳಿಸಿದ್ದರು.