ನವದೆಹಲಿ, ಫೆ.26 (DaijiworldNews/PY) : ಸಿಎಎ ವಿರೋಧಿ ಪ್ರತಿಭಟನಾಕಾರರಿಂದ ಈಶಾನ್ಯ ದೆಹಲಿಯಲ್ಲಿ ಆರಂಭವಾದ ಹಿಂಸಾಚಾರದಲ್ಲಿ ಮೃತಪಟ್ಟರ ಸಂಖ್ಯೆ 20ಕ್ಕೇರಿದೆ. ಈ ನಡುವೆ ಹೆಚ್ಚಾಗುತ್ತಿರುವ ಹಿಂಸಾಚಾರದ ಹಿನ್ನೆಲೆ ಕೇವಲ 24 ಗಂಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ಬಾರಿ ಸಭೆ ನಡೆಸಿದ್ದಾರೆ ಎಂಬುದಾಗಿ ವರದಿ ತಿಳಿಸಿದೆ.
ಹಿಂಸಾಚಾರದ ಹಿನ್ನೆಲೆ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಸಲುವಾಗಿ ಅಮಿತ್ ಶಾ ಸಭೆ ನಡೆಸಿದ್ದು, ಐಪಿಎಸ್ ಅಧಿಕಾರಿ ಎಸ್ ಎನ್ ಶ್ರೀವಾಸ್ತವ್ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳವಾರ ಶ್ರೀವಾಸ್ತವ್ ಅವರನ್ನು ದೆಹಲಿಯ ವಿಶೇಷ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು.