ನವದೆಹಲಿ, ಫೆ 26 (Daijiworld News/MB) : "ನಾನು ನನ್ನ ಸಹೋದರ ಸಹೋದರಿಯರಲ್ಲಿ ಶಾಂತಿ ಹಾಗೂ ಭ್ರಾತೃತ್ವವನ್ನು ಕಾಪಾಡಲು ಮನವಿ ಮಾಡುತ್ತೇನೆ" ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ದೆಹಲಿಯಲ್ಲಿ ಕಳೆದ 3 ದಿನಗಳಿಂದ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಪರ ಹಾಗೂ ವಿರೋಧಿಗಳ ನಡುವಿನ ಹಿಂಸಾಚಾರದ ಕುರಿತಾಗಿ ಟ್ವೀಟ್ ಮಾಡಿರುವ ಮೋದಿಯವರು ಶಾಂತಿ ಹಾಗೂ ಭ್ರಾತೃತ್ವವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.
"ದೆಹಲಿಯ ವಿವಿಧ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದೇನೆ. ಪೊಲೀಸರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಹಾಗೂ ದೆಹಲಿಯನ್ನು ಸಹಜ ಸ್ಥಿತಿಗೆ ಮರಳಿಸಲು ಪ್ರಯತ್ನ ಮಾಡುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.
ಈಗಾಗಲೇ ಹಿಂಸಾಚಾರದಿಂದಾಗಿ ದೆಹಲಿಯಲ್ಲಿ 21 ಮಂದಿ ಮೃತಪಟ್ಟಿದ್ದು 180 ಕ್ಕೂ ಅಧಿಕ ಮಂದಿಗೆ ಗಾಯವಾಗಿದೆ.