ನವದೆಹಲಿ, ಫೆ.26 (DaijiworldNews/PY) : ದೇಶದಲ್ಲಿ 1984ರ ಸಿಖ್ ವಿರೋಧಿ ಗಲಭೆಯಂತೆ ಮತ್ತೊಂದು ಘಟನೆ ಆಗಲು ಬಿಡುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಬುಧವಾರ ತಿಳಿಸಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದ ವಿಚಾರಣೆ ಸಂದರ್ಭ, ದೇಶದಲ್ಲಿ 1984ರ ಸಿಖ್ ವಿರೋಧಿ ಗಲಭೆಯಂತೆ ಮತ್ತೊಂದು ಘಟನೆ ಆಗಲು ಬಿಡುವುದಿಲ್ಲ. ಗುಪ್ತಚರ ದಳದ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆದಿದೆ ಎನ್ನು ವಿಚಾರ ತಿಳಿಯಿತು. ಇಂತಹ ಘಟನೆಗಳ ವಿರುದ್ದ ಶೀಘ್ರವೆ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಅವರು ತಿಳಿಸಿದ್ದಾರೆ.
ವಿವಾದಿತ ಹೇಳಿಕೆಯನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ನೀಡಿದ್ಧಾರೆ ಎಂಬ ವಿಚಾರಕ್ಕೆ ಸಂಬಂಧಿಸಿದ ವಿಡಿಯೋವನ್ನು ಕೋರ್ಟ್ ಪರಿಶೀಲಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ಜನರಲ್ಲಿ ವಿಶ್ವಾಸ ವೃದ್ಧಿಸುವ ಕೆಲಸ ಮಾಡಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಪೊಲೀಸರಿಗೆ ಗಾಯಾಳುಗಳನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡುವಂತೆ ಸೂಚಿಸಿದೆ.