ಬೆಂಗಳೂರು, ಫೆ 27 (Daijiworld News/MB) : ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಬಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
"ಮನುಷ್ಯನೊಬ್ಬನ ತಲೆಗೆ ಡ್ರಿಲ್ಲಿಂಗ್ ಯಂತ್ರ ಇಟ್ಟು ಕೊರೆಯುವುದು ಯಾವ ಪ್ರತಿಭಟನೆಯ ಲಕ್ಷಣ!" ಎಂದು ಅವರು ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ನಡೆದ ಹಿಂಸಾಚಾರದಿಂದಾಗಿ ಮೃತಪಟ್ಟ ಹೆಡ್ ಕಾನ್ಸ್ ಟೇಬಲ್ ರತನ್ ಲಾಲ್ ಕುಟುಂಬಕ್ಕೆ ದೆಹಲಿ ಸರ್ಕಾರ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದು ಹಾಗೆಯೇ ಈ ಹಿಂಸಾಚಾರದಲ್ಲಿ ಮೃತಪಟ್ಟ ಇತರರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.